ಬಿಸಿಯೂಟ ನೌಕರರ ನಿವೃತ್ತಿಗೆ ಗೌರವ ನೀಡುವಂತೆ ಮುಖ್ಯಮಂತ್ರಿಗೆ ಸಿಐಟಿಯು ಮನವಿ - Karavali Times ಬಿಸಿಯೂಟ ನೌಕರರ ನಿವೃತ್ತಿಗೆ ಗೌರವ ನೀಡುವಂತೆ ಮುಖ್ಯಮಂತ್ರಿಗೆ ಸಿಐಟಿಯು ಮನವಿ - Karavali Times

728x90

11 April 2022

ಬಿಸಿಯೂಟ ನೌಕರರ ನಿವೃತ್ತಿಗೆ ಗೌರವ ನೀಡುವಂತೆ ಮುಖ್ಯಮಂತ್ರಿಗೆ ಸಿಐಟಿಯು ಮನವಿ

ಬಂಟ್ವಾಳ, ಎಪ್ರಿಲ್ 11, 2022 (ಕರಾವಳಿ ಟೈಮ್ಸ್) : 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ  ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಮಧ್ಯಾಹ್ನದ ಬಿಸಿಯೂಟ ಯೋಜನೆಯು ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ  ತಮ್ಮ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ಅಕ್ಷರ ದಾಸೋಹ ನೌಕರರ ಸಂಘ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟು ಈ ಮನವಿ ಸಲ್ಲಿಸಿದೆ. 

60 ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಬಿಡುಗಡೆ ಮಾಡಬೇಕು, ಮಾರ್ಚ್ 31, 2022ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರಿಲ್ 10, 2022 ಎಂದು ಮರು ಆದೇಶ ನೀಡಬೇಕು, ಬಜೆಟಿನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ 10 ಸಾವಿರ ವೇತನವನ್ನು 2022 ರ ಜನವರಿಯಿಂದ ಅನ್ವಯಿಸಿ ಜಾರಿ ಮಾಡಬೇಕು, ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಹಾಗೂ ಖಾಯಂ ಮಾಡುವ ತನಕ 45 ಮತ್ತು 46ನೇ  ಭಾರತೀಯ ಕಾರ್ಮಿಕ  ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು, ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಅನುಸರಿಸಬಾರದು ಹಾಗೂ ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ವಹಿಸಬಾರದು, ಕರ್ನಾಟಕದಲ್ಲಿ ಶಿಕ್ಷಣ ಇಲಾಖೆಯ ಶಿಫಾರಸ್ಸಿನಂತೆ 6 ಸಾವಿರ ಮತ್ತು 5 ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು, ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ನೀಡಬೇಕು, ಎಲ್ಲರಿಗೂ ಅನ್ವಯವಾಗದೇ ಇರುವ ಮನ್-ಧನ್ ಯೋಜನೆ ಮಾಡಿಸಲು ಇಲಾಖೆಯಿಂದ ಒತ್ತಾಯಿಸಬಾರದು, ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು, ಬಿಸಿಯೂಟ ನೌಕರರಿಗೆ ಖಾಯಂ ಶಾಸನಾತ್ಮಕ ಸವಲತ್ತುಗಳನ್ನು ಜಾರಿ ಮಾಡಬೇಕು, ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ವೇತನ ಪಾವತಿಯಾಗಬೇಕು, ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು, ಪ್ರತಿ ಶಾಲೆಯಲ್ಲಿ ಕನಿಷ್ಟ 2 ಜನ ಅಡುಗೆಯವರು ಇರಲೇಬೇಕು ಎಂಬ ಬೇಡಿಕೆಗಳುಳ್ಳ ಮನವಿಯನ್ನು ಮುಖ್ಯಮಂತ್ರಿಗೆ ನೀಡಲಾಯಿತು.

ನಿಯೋಗದಲ್ಲಿ ಅಕ್ಷರ ದಾಸೋಹ ಸಂಘದ ಅಧ್ಯಕ್ಷೆ ವಿನಯ ನಡುಮೊಗರು, ಸಿಐಟಿಯು ಕಾರ್ಯದರ್ಶಿ ರಾಮಣ್ಣ ವಿಟ್ಲ, ಅಕ್ಷರ ದಾಸೋಹ ನೌಕರರಾದ ಬೇಬಿ, ಕಲ್ಯಾಣಿ, ಲತಾ, ಮೀನಾಕ್ಷಿ, ಮೇರಿವಾಸ್, ವಾಣಿ ಮೊದಲಾದವರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಿಸಿಯೂಟ ನೌಕರರ ನಿವೃತ್ತಿಗೆ ಗೌರವ ನೀಡುವಂತೆ ಮುಖ್ಯಮಂತ್ರಿಗೆ ಸಿಐಟಿಯು ಮನವಿ Rating: 5 Reviewed By: karavali Times
Scroll to Top