ಬಂಟ್ವಾಳ, ಎಪ್ರಿಲ್ 12, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಸಮೀಪದ ಕೊಡಾಜೆ ಆರಂಗಳ ಸೂಪರ್ ಮಾರ್ಕೆಟ್ ಎದುರು ಭಾಗದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಶವ ಕೊಳೆತು ಅಸ್ತಿಗಳು ಹೊರಗೆ ಬಂದ ಸ್ಥಿತಿಯಲ್ಲಿ ಕಂಡು ಬಂದಿದೆ.
ಸುಮಾರು 15-20 ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು-ಪರಿಚಯ ಗೊತ್ತಾಗಿಲ್ಲ. ಯಾವಾಗ ಯಾವ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ ಎಂಬುದು ಪೊಲೀಸ್ ತನಿಖೆಯಿಂದಷ್ಟೆ ತಿಳಿದು ಬರಬೇಕಾಗಿದೆ.
ಸ್ಥಳಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವ ವಿಲೇವಾರಿಗೆ ಕ್ರಮ ಕೈಗೊಂಡಿದ್ದಾರೆ.
0 comments:
Post a Comment