ಬಂಟ್ವಾಳ, ಎಪ್ರಿಲ್ 26, 2022 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಾಲಾಡಿ ನಿವಾಸಿ ಪ್ರಶಾಂತ್ (38) ಅವರು ಸಾಲದ ಬಾಧೆಯಿಂದ ನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವಿವಾಹಿತರಾಗಿರುವ ಪ್ರಶಾಂತ್ ಅವರು ಸ್ಥಳೀಯ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಸಾಲ ಮಾಡಿದ್ದು, ಸಾಲ ತೀರಿಸಲು ಸಾಧ್ಯವಾಗದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment