ಬಂಟ್ವಾಳ, ಎಪ್ರಿಲ್ 27, 2022 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ ಹಚ್ಚಿದ ವಿಟ್ಲ ಪೊಲೀಸರು ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ಮಂಜುನಾಥ ನೇತೃತ್ವದ ಪೊಲೀಸರು ಮಂಗಳವಾರ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಬುಧವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಕೇಪು ಗ್ರಾಮದ ನೀರ್ಕಜೆ ಎಂಬಲ್ಲಿ ಪಿಕಪ್ ವಾಹನವೊಂದು ಬುಳ್ಳೇರಿಕಟ್ಟೆ ಕಡೆಯಿಂದ ಉಕ್ಕುಡ ಕಡೆಗೆ ಬರುತ್ತಿದ್ದುದನ್ನು ನಿಲ್ಲಿಸಲು ಸೂಚಿಸಿದಾಗ ಪಿಕಪ್ ಚಾಲಕ ವಾಹನವನ್ನು ನಿಲ್ಲಿಸದೇ ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ವಾಹನವನ್ನು ನಿಲ್ಲಿಸಿ ಪರಾರಿಯಾಗಿರುತ್ತಾನೆ.
ಸದ್ರಿ ಕೆಎ 19 ಎಎ 2571 ನೇ ಮಹೇಂದ್ರ ಬೊಲೆರೋ ಪಿಕ್ ಅಪ್ ವಾಹನ ಪರಿಶೀಲನೆ ನಡೆಸಿದಾಗ ಅದಕ್ಕೆ ನೀಲಿ ಬಣ್ಣದ ಟರ್ಪಾಲು ಹೊದಿಸಿ ಅದರೊಳಗೆ 5 ಹೋರಿ ಕರುಗಳನ್ನು ಕಟ್ಟಿ ಹಾಕಿರುವುದು ಕಂಡು ಬಂದಿದೆ. ಈ ಜಾನುವಾರು ಸಾಗಾಟದ ಬಗ್ಗೆ ಯಾವುದೇ ಪರವಾನಿಗೆ ಹೊಂದಿರುವುದಿಲ್ಲ. ವಾಹನ ಸಹಿತ ಅದರಲ್ಲಿದ್ದ 5 ಹೋರಿ ಕರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 4.10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2022 ಕಲಂ 5, 12 THE KARNATAKA PREVENTION OF SLAUGHTER AND PRESERVATION OF CATTLE ORDINANCE-2020 act ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment