ಬಂಟ್ವಾಳ, ಮೇ 10, 2022 (ಕರಾವಳಿ ಟೈಮ್ಸ್) : ತಾಲೂಕಿನ ಸಜಿಪಮೂಡ ಗ್ರಾಮದ ಸುಭಾಶ್ ನಗರ ಬಳಿ ಸ್ನೇಹಿತನ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳೀಯ ನಿವಾಸಿ ಸುನಿಲ್ ಕುಮಾರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎಲೆಕ್ಟ್ರಿಕ್ ವೃತ್ತಿಯ ಸುನಿಲ್ ಕುಮಾರ್ ಅವರು ತನ್ನ ಕೆಲಸ ಮುಗಿಸಿ ರಸ್ತೆಯಲ್ಲಿ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment