ಬೆಂಗಳೂರು, ಮೇ 26, 2022 (ಕರಾವಳಿ ಟೈಮ್ಸ್) : ಹಲವು ಮಂದಿ ವಿದ್ಯಾರ್ಥಿಗಳು ಹಾಗೂ ಪೋಷಕರು ಅವಕಾಶ ಕೋರಿದ ಹಿನ್ನಲೆಯಲ್ಲಿ ಯುಜಿಸಿಇಟಿ-2022ರ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿ ಬಾಕಿ ಇರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ಮೇ 29 ರಿಂದ 30 ರವರೆಗೆ ಆನ್ ಲೈನ್ ಅರ್ಜಿ ಸಲ್ಲಿಸಲು, ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಇದು ಅಂತಿಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಬಾಕಿ ಇರುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳಳಬಹುದು. ಯಾವುದೇ ಕಾರಣಕ್ಕೂ ಇನ್ನೊಮ್ಮೆ ಸಿಇಟಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
0 comments:
Post a Comment