ಬೆಂಗಳೂರು, ಮೇ 12, 2022 (ಕರಾವಳಿ ಟೈಮ್ಸ್) : ಯುಜಿಸಿಇಟಿ-2022ರ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದ್ದು, ಮೇ 19, 2022 ರ ಸಂಜೆ 5 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವಾಗ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಎಚ್ಚರಿಕೆಯಿಂದ ನಮೂದಿಸುವುದು. ಕಾರಣ ಸದ್ರಿ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶ ಇರುವುದಿಲ್ಲ.
ಸಲ್ಲಿಸಿರುವ ಅರ್ಜಿಯಲ್ಲಿ ಬದಲಾವಣೆ ಮಾಡಲು ಮೇ 19ರ ನಂತರ ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
0 comments:
Post a Comment