ಬಂಟ್ವಾಳ, ಮೇ 13, 2022 (ಕರಾವಳಿ ಟೈಮ್ಸ್) : ತಾಲೂಕು ನೂತನ ತಹಶೀಲ್ದಾರ್ ಆಗಿ ಡಾ ಸ್ಮಿತಾ ರಾಮು ಶುಕ್ರವಾರ (ಮೇ 13) ಸ್ವೀಕರಿಸಿದ್ದಾರೆ. ಇಲ್ಲಿನ ತಹಶೀಲ್ದಾರ್ ಆಗಿದ್ದ ರಶ್ಮಿ ಎಸ್ ಆರ್ ಅವರು ಇತ್ತೀಚೆಗೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಬಳಿಕ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಇದುವರೆಗೆ ಜಿಲ್ಲಾಧಿಕಾರಿ ಕಚೇರಿಯ ನಿಸರ್ಗ ಪ್ರಿಯ ಜೆ ಅವರು ಪ್ರಭಾರ ಹುದ್ದೆಯನ್ನು ನಿಭಾಯಿಸಿದ್ದರು.
ನೂತನ ತಹಶೀಲ್ದಾರ್ ಡಾ ಸ್ಮಿತಾ ಅವರು ಕೆಎಎಸ್ ಅಧಿಕಾರಿಯಾಗಿದ್ದು, ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿದ್ದರು. ಇದೀಗ ಬಂಟ್ವಾಳಕ್ಕೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡು ಬಂದಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.
ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬಂದಿ ವರ್ಗ ನೂತನ ತಹಶೀಲ್ದಾರ್ ಅವರನ್ನು ಪುಷ್ಟಗುಚ್ಚ ನೀಡಿ ಸ್ವಾಗತಿಸಿ, ಶುಭ ಹಾರೈಸಿದರು.
0 comments:
Post a Comment