ಬಂಟ್ವಾಳ, ಮೇ 27, 2022 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ಸಿಟಿ ಪ್ಲಾಝಾ ವಸತಿ ಸಂಕೀರ್ಣದ 3ನೇ ಮಹಡಿಯ ಸಿಟೌಟಿನಲ್ಲಿ ಗುರುವಾರ ಸ್ನೇಹಿತರ ಜೊತೆ ಸೇರಿ ಆಟ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಲಡ್ಕ ನಿವಾಸಿ ಅಹಮದ್ ಅವರ ಪುತ್ರ, ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಶಾಹಿಲ್ (12) ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಯ ಶೋಕಾರ್ಥ ಕಲ್ಲಡ್ಕ ಪ್ರಾಥಮಿಕ ಶಾಲೆಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
27 May 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment