ಪುತ್ತೂರು, ಮೇ 26, 2022 (ಕರಾವಳಿ ಟೈಮ್ಸ್) : ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗದಿಂದ 2022-23ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ರಾಜ್ಯ ಸರಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಿದ ದಾಖಲೆಗಳ ಪ್ರತಿಗಳು, ಭಾವಚಿತ್ರ ಹಾಗೂ ಶುಲ್ಕಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿಭಾಗಾವಾರು ಬಸ್ ನಿಲ್ದಾಣಗಳ ಪಾಸ್ ಕೌಂಟರಿನಲ್ಲಿ ಸಲ್ಲಿಸಿ ಪಾಸುಗಳನ್ನು ಪಡೆದುಕೊಳ್ಳಬಹುದು ಎಂದು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment