ಬೆಂಗಳೂರು, ಮೇ 15, 2022 (ಕರಾವಳಿ ಟೈಮ್ಸ್) : ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ನಾಳೆಯಿಂದ (ಮೇ 16) ಮೇ 22ರವರೆಗೆ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ನಡೆಯಲಿದೆ.
ನಾಳೆ (ಮೇ 16) ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕ್ರೀಡಾಕೂಟಕ್ಕೆ ರಾಜ್ಯ ಸರಕಾರದಿಂದ ಎರಡೂವರೆ ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕೂಟದಲ್ಲಿ 21 ಕ್ರೀಡಾ ಸ್ಫರ್ಧೆಗಳು ಇರಲಿದ್ದು, 14 ವರ್ಷ ವಯಸ್ಸಿನೊಳಗಿನ ಒಟ್ಟು 5 ಸಾವಿರ ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ. ಮಿನಿ ಒಲಿಂಪಿಕ್ ಕ್ರೀಡಾಕೂಟ ಆಯೋಜನೆಯಾಗುತ್ತಿರುವುದು ಇದು 2ನೇ ಬಾರಿಯಾಗಿದೆ.
ಅಥ್ಲೆಟಿಕ್ಸ್, ಅರ್ಚರಿ, ಬ್ಯಾಡ್ಮಿಂಟನ್, ಬಾಸ್ಕೆಟ್ ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಫುಟ್ಭಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ ಬಾಲ್, ಹಾಕಿ, ಜೂಡೋ, ಖೋಖೋ, ಲಾನ್ ಟೆನ್ನಿಸ್, ನೆಟ್ ಬಾಲ್, ರೈಫಲ್ ಶೂಟಿಂಗ್, ಸ್ವಿಮ್ಮಿಂಗ್, ಟೇಬಲ್ ಟೆನ್ನಿಸ್, ಟೇಕ್ವಾಂಡೋ, ವೇಟ್ ಲಿಫ್ಟಿಂಗ್ ಸ್ಫರ್ಧೆಗಳು ಇರಲಿವೆ ಎಂದು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್ ತಿಳಿಸಿದ್ದಾರೆ.
0 comments:
Post a Comment