ಬಂಟ್ವಾಳ, ಮೇ 18, 2022 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಕಾರ್ಯದರ್ಶಿಯಾಗಿ ನಿಯಾಝ್ ಫಜೀರ್ ಅವರನ್ನು ನೇಮಿಸಿ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಆದೇಶ ಹೊರಡಿಸಿದ್ದಾರೆ.
ನಿಯಾಝ್ ಫಜೀರ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಫಜೀರು ಬೂತ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಫಜೀರು ವಲಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ, ಫಜೀರು ವಲಯ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿ ಪಕ್ಷದ ತಳಮಟ್ಟದಿಂದ ಸಕ್ರಿಯರಾಗಿರುತ್ತಾರೆ.
0 comments:
Post a Comment