ಬೆಂಗಳೂರು, ಮೇ 31, 2022 (ಕರಾವಳಿ ಟೈಮ್ಸ್) : 2021-22 ನೇ ಸಾಲಿನ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಸ್.ಎಸ್.ಪಿ. (ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟಲ್) ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಿಸಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ವಿಕಲ ಚೇತನರ ಕಲ್ಯಾಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಕೃಷಿ ಇಲಾಖೆಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಜೂನ್ 16, 2022 ಆಗಿದ್ದು, ಉಳಿದಂತೆ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಹಾಗೂ ಹಿಂದುಳಿದ ಕಲ್ಯಾಣ ಇಲಾಖೆಗಳ ಕೊನೆ ದಿನಾಂಕ ಜೂನ್ 30, 2022 ಆಗಿರುತ್ತದೆ.
ಎನ್.ಎಸ್.ಪಿ. (ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್) ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಎಸ್.ಎಸ್.ಪಿ. ಪೋರ್ಟಲ್ ನಲ್ಲಿಯೂ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದ್ದು, ವಿವಿಧ ವರ್ಗಗಳ ಬಾಕಿ ಇರುವ ವಿದ್ಯಾರ್ಥಿಗಳು ಕೊನೆ ದಿನಾಂಕಕ್ಕೆ ಮುಂಚಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳಬಹುದು.
0 comments:
Post a Comment