ಬಂಟ್ವಾಳ, ಮೇ 06, 2022 (ಕರಾವಳಿ ಟೈಮ್ಸ್) : ಸನಾತನ ಭಾರತದ ಸಾಂಸ್ಕೃತಿಯನ್ನು ಜಗತ್ತಿಗೆ ಸಾರಿದವರಲ್ಲಿ ಶಂಕರಾಚಾರ್ಯರು ಮೊದಲಿಗರು. ಇವರು ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದರು. ಆ ಕಾಲದಲ್ಲಿ ಇತರ ಮತಗಳ ದಾಳಿಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದರು ಶಂಕರಾಚಾರ್ಯರು ಎಂದು ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಅಭಿಪ್ರಾಯಪಟ್ಟರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಿ ಸಿ ರೋಡು ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ (ಮೇ 6) ನಡೆದ ಶಂಕರಾಚಾರ್ಯರ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಸಂದರ್ಭ ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment