ಬೆಂಗಳೂರು, ಮೇ 19, 2022 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಗುರುವಾರ ಪ್ರಕಟಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ದಾಖಲೆಯ ಫಲಿತಾಂಶ ಪ್ರಕಟಗೊಂಡಿದೆ. ಶೇ. 85.63 ರಷ್ಟು ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ 10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ ಎನ್ನಲಾಗಿದೆ.
ಶೇ 81.03 ಮಂದಿ ವಿದ್ಯಾರ್ಥಿಗಳು ಹಾಗೂ ಶೇ.90.29 ಮಂದಿ ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಪೂರ್ಣ ಅಂಕಗಳನ್ನುಪಡದಿದ್ದಾರೆ.
ಶಿಕ್ಷಣ ಸಚಿವ ನಾಗೇಶ್ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
0 comments:
Post a Comment