ಬೆಂಗಳೂರು, ಮೇ 15, 2022 (ಕರಾವಳಿ ಟೈಮ್ಸ್) : ಈ ಬಾರಿಯ ಅಂದರೆ 2022-23ನೇ ಶೈಕ್ಷಣಿಕ ವರ್ಷವೆಂದು ಘೋಷಿಸಿದ ರಾಜ್ಯ ಸರಕಾರ ಮೇ 16 ರಿಂದಲೇ ಶಾಲಾರಂಭಕ್ಕೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ಕಳೆದ ಬಾರಿ ವಿತರಿಸಿದ ಎಲ್ಲಾ ರೀತಿಯ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಈ ಅವಧಿವರೆಗೂ ಕಳೆದ ಬಾರಿ ಪಡೆದುಕೊಂಡ ಬಸ್ ಪಾಸ್ ಮೂಲಕವೇ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ.
ಹೊಸ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಬಸ್ಸು ಪಾಸು ವಿತರಿಸುವ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಬಳಿಕ ವಿದ್ಯಾರ್ಥಿಗಳು ನಿಯಮಾನುಸಾರ ರಿಯಾಯಿತಿ ದರದ/ ಉಚಿತ ಬಸ್ ಪಾಸುಗಳನ್ನು ಸರಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಹೊಸ ಪಾಸುಗಳನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು.
ಈ ಬಗ್ಗೆ ನಿಗಮದ ಬಸ್ಸುಗಳ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ತಕ್ಷಣ ಮಾಹಿತಿ ರವಾನಿಸಿ ವಿದ್ಯಾರ್ಥಿಸ್ನೇಹಿಯಾಗಿ ವ್ಯವಹರಿಸುವಂತೆ ರಾಜ್ಯದ ಎಲ್ಲಾ ಹಿರಿಯ ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿ (ಕೆ.ಎಸ್.ಆರ್.ಟಿ.ಸಿ. ಡಿಸಿ) ಗಳಿಗೆ ಕೆ.ಎಸ್.ಆರ್.ಟಿ.ಸಿ. ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶಿಸಿ ಪ್ರಕಟಣೆ ಹೊರಡಿಸಿದ್ದಾರೆ.
0 comments:
Post a Comment