ಬೆಂಗಳೂರು, ಮೇ 07, 2022 (ಕರಾವಳಿ ಟೈಮ್ಸ್) : 2022ನೇ ಸಾಲಿನ ಯುಜಿಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಮೇ 5ರವರೆಗೆ ಇದ್ದ ಅಂತಿಮ ದಿನಾಂಕವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಅರ್ಜಿ ಸಲ್ಲಿಸದೆ ಇರುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಕೆಗೆ ಬಾಕಿ ಇರುವ ವಿದ್ಯಾರ್ಥಿಗಳು ಮೇ 8 ರಿಂದ ಮೇ 12ರವರೆಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬಹುದು. ಅಲ್ಲದೆ ಈ ಮೊದಲು ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸದೆ ಇರುವ ಅಭ್ಯರ್ಥಿಗಳೂ ಕೂಡಾ ಅವರ ಐಡಿ ಮೂಲಕ ಲಾಗಿನ್ ಆಗಿ ಅರ್ಜಿ ಮಾಹಿತಿ ಪೂರ್ಣಗೊಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟಿನಲ್ಲಿ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳ ಅಗತ್ಯ ಇದ್ದಲ್ಲಿ ವಿದ್ಯಾರ್ಥಿಗಳು ಞeಚಿugಛಿeಣ2022@gmಚಿiಟ.ಛಿom ಇಮೇಲ್ ಗೆ ಸಂದೇಶ ಕಳಿಸಿ ಮಾಹಿತಿ ಪಡೆದುಕೊಳ್ಳಬಹುದು.
ಈಗಾಗಲೇ ಆನ್ ಲೈನ್ ಮೂಲಕ ಸಿಇಟಿ-2022ಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಿಕೊಳ್ಳುವ ಅಗತ್ಯವಿದ್ದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸಿ ದಿನಾಂಕಗಳನ್ನು ಪ್ರಾಧಿಕಾರದ ವೈಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
0 comments:
Post a Comment