ಬಂಟ್ವಾಳ, ಮೇ 08, 2022 (ಕರಾವಳಿ ಟೈಮ್ಸ್) : ತಾಲೂಕಿನ ವಿಟ್ಲ ಸಮೀಪದ ಪುಚ್ಚೆಗುತ್ತು-ಜೋಗಿಬೆಟ್ಟು ನಿವಾಸಿ ವಾಮನ ಪೂಜಾರಿ ಅವರ ಪುತ್ರ ಅಪ್ರಾಪ್ತ ವಯಸ್ಸಿನ ಬಾಲಕ ಉಜ್ವಲ್ (14) ಎಂಬಾತ ಪೆÇೀಷಕರು ಟಿವಿ ನೋಡಬೇಡ ಎಂದು ಬುದ್ದಿವಾದ ಹೇಳಿದ ಕಾರಣಕ್ಕೆ ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ವಿಟ್ಲ ಮಾದರಿ ಶಾಲೆಯ ವಿದ್ಯಾರ್ಥಿಯಾಗಿರುವ ಉಜ್ವಲ್ ಮನೆಯಲ್ಲಿ ಟಿವಿ ನೋಡುತ್ತಾ ಸಮಯ ಕಳೆಯುತ್ತಿರುವುದನ್ನು ಕಂಡ ಪೆÇೀಷಕರು ಟಿವಿ ನೋಡಿದರೆ ಆಗುವ ಅನಾಹುತಗಳ ಬಗ್ಗೆ ಮನವರಿಕೆ ಮಾಡಲು ಪ್ರಯತ್ನಿಸಿದ ಕಾರಣಕ್ಕೆ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
0 comments:
Post a Comment