ಬಂಟ್ವಾಳ, ಮೇ 14, 2022 (ಕರಾವಳಿ ಟೈಮ್ಸ್) : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಿ ಸಿ ರೋಡು ಇದರ ಆಶ್ರಯದಲ್ಲಿ ಬಿ ಸಿ ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ “ಕರಾವಳಿ ಕಲೋತ್ಸವ-2022” ಕಾರ್ಯಕ್ರಮದ ಪ್ರಯುಕ್ತ ಮೇ 12 ರಂದು ಗುರುವಾರ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತಿಷ್ಠಿತ ತಂಡಗಳಿಂದ ದಫ್ ಪ್ರದರ್ಶನ ನಡೆಯಿತು. ಆಕರ್ಷಕ ಶೈಲಿಯ ಪ್ರದರ್ಶನದ ಮೂಲಕ ಉಡುಪಿ ಜಿಲ್ಲೆಯ ಕಟಪಾಡಿ-ಮಣಿಪುರದ ಖಲಂದರ್ ಷಾ ದಫ್ ತಂಡ ಹಾಗೂ ಬೆಳ್ಮ-ಅಡ್ಕರೆಪಡ್ಪುವಿನ ಖಿದ್ಮತುಲ್ ಇಸ್ಲಾಂ ದಫ್ ತಂಡದ ಸದಸ್ಯರು ಸಾರ್ವಜನಿಕರ ಮನಸೂರೆಗೊಂಡರು.
ಕರಾವಳಿ ಕಲೋತ್ಸವ ಸಮಿತಿಯ ಅಧ್ಯಕ್ಷ ಸುದರ್ಶನ್ ಜೈನ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಂಚಾಲಕ ಮೋಹನದಾಸ ಕೊಟ್ಟಾರಿ ಮುನ್ನೂರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ, ದಫ್ ಎಸೋಸಿಯೇಶನ್ ಪದಾಧಿಕಾರಿಗಳಾದ ಯು ಮುಸ್ತಫಾ ಆಲಡ್ಕ, ಇರ್ಶಾದ್ ಪಾಣೆಮಂಗಳೂರು, ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಭಾಗವಹಿಸಿದ್ದರು.
ಪ್ರಮುಖರಾದ ಹನೀಫ್ ಹಾಸ್ಕೋ, ಅಬ್ದುಲ್ಲಾ ಮೋನು ನಂದಾವರ, ಇರ್ಶಾದ್ ಡ್ರೀಮ್ಸ್, ಶಿವಪ್ರಸಾದ್ ಬಂಟ್ವಾಳ, ರಾಜಾ ಚೆಂಡ್ತಿಮಾರ್, ನವೀನ, ಸೌಮ್ಯ, ಯೋಗೀಶ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ದಫ್ ತರಬೇತುದಾರ ಹಂಝ ಉಸ್ತಾದ್ ಹಾಗೂ ಕರಾವಳಿ ದಫ್ ಪ್ರದರ್ಶನ ಸಮಿತಿಯ ಪ್ರಧಾನ ಸಂಚಾಲಕ ಮುಹಮ್ಮದ್ ನಂದಾವರ ಅವರನ್ನು ಸನ್ಮಾನಿಸಲಾಯಿತು. ಅಸ್ತರ್ ಆಲಡ್ಕ ಮದ್‍ಹ್ ಗೀತೆ ಹಾಡಿದರು.
ದ ಕ ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಉಪಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಸ್ವಾಗತಿಸಿ, ಅಧ್ಯಕ್ಷ ಲತೀಫ್ ನೇರಳಕಟ್ಟೆ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಪಿ ಎಂ ಅಶ್ರಫ್ ಪಾಣೆಮಂಗಳೂರು ವಂದಿಸಿ, ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment