ಬಂಟ್ವಾಳ : ಹಿಟ್ ಆಂಡ್ ರನ್ ಪ್ರಕರಣದಲ್ಲಿ ಪಾದಚಾರಿ ಕೂಲಿ ಕಾರ್ಮಿಕ ಮಹಿಳೆ ದಾರುಣ ಸಾವು - Karavali Times ಬಂಟ್ವಾಳ : ಹಿಟ್ ಆಂಡ್ ರನ್ ಪ್ರಕರಣದಲ್ಲಿ ಪಾದಚಾರಿ ಕೂಲಿ ಕಾರ್ಮಿಕ ಮಹಿಳೆ ದಾರುಣ ಸಾವು - Karavali Times

728x90

26 May 2022

ಬಂಟ್ವಾಳ : ಹಿಟ್ ಆಂಡ್ ರನ್ ಪ್ರಕರಣದಲ್ಲಿ ಪಾದಚಾರಿ ಕೂಲಿ ಕಾರ್ಮಿಕ ಮಹಿಳೆ ದಾರುಣ ಸಾವು

ಬಂಟ್ವಾಳ, ಮೇ 26, 2022 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಸಮೀಪದ ತಲಪಾಡಿ ಬಳಿ ಗುರುವಾರ ಬೆಳಿಗ್ಗೆ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೂಲಿ ಕಾರ್ಮಿಕ ಮಹಿಳೆ, ಮೂಲತಃ ಕೇರಳ ರಾಜ್ಯದ ನಿವಾಸಿ ರಾಜಮ್ಮ (60) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಗುರುವಾರ ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ರಾಜಮ್ಮ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾದ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಹಿಟ್ ಆಂಡ್ ರನ್ ಪ್ರಕರಣದಲ್ಲಿ ಪಾದಚಾರಿ ಕೂಲಿ ಕಾರ್ಮಿಕ ಮಹಿಳೆ ದಾರುಣ ಸಾವು Rating: 5 Reviewed By: karavali Times
Scroll to Top