ಬಂಟ್ವಾಳ, ಜೂನ್ 07, 2022 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಸಮೀಪದ ಅಜ್ಜಿಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಶಾಲಾ ಆವರಣದ ಬದಿಯಲ್ಲಿ ಉಪಯುಕ್ತ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಶಾಲಾ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಕೇಶವ ದೈಪಲ ಶಾಲಾ ಆವರಣದ ಬದಿಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಯಿತು.
ಈ ಸಂದರ್ಭ ಬಿ ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ, ಶಾಲಾ ಹಳೆ ವಿದ್ಯಾರ್ಥಿಗಳಾದ ಗಣೇಶ್, ವಿದ್ಯಾಶ್ರೀ, ಪ್ರೌಢಶಾಲಾ ಹಿರಿಯ ಶಿಕ್ಷಕ ರಮೇಶ್ ನಾಯಕ್, ಕಲಾಶಿಕ್ಷಕ ಸುಬ್ರಹ್ಮಣ್ಯ ಭಟ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment