ಆನ್ ಲೈನ್ ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನಾಂಕ
ಬೆಂಗಳೂರು, ಜೂನ್ 20, 2022 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ ನೀಟ್ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಆರ್ಕ್, ಬಿಟೆಕ್ ಹಾಗೂ ಆಯುಷ್ ಮೊದಲಾದ ವೃತ್ತಿಪರ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಆನ್ ಲೈನ್ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಿ ಪೂರಕ ದಾಖಲೆಗಳ ಹಾರ್ಡ್ ಪ್ರತಿಗಳನ್ನು ನಿಗದಿತ ಅಂತಿಮ ದಿನಾಂಕದ ಒಳಗಾಗಿ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವಂತೆ ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment