ಸುಬ್ರಹ್ಮಣ್ಯ, ಜೂನ್ 15, 2022 (ಕರಾವಳಿ ಟೈಮ್ಸ್) : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತರು ಕಳೆದ ಮಾರ್ಚ್ 23 ರಂದು ಕಾರಿನಲ್ಲಿ ಬಂದು ದನ ಕದಿಯಲು ಯತ್ನಿಸಿದ ಬಗ್ಗೆ ಸುಬ್ರಹ್ಮಣ್ಯ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 37/2022 ಕಲಂ 379, 511 ಐಪಿಸಿಯಂತೆ ರಂತೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಉಮ್ಮರ್ ಫಾರೂಕ್ ಎಂಬಾತನನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತರ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇತರ 3 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment