ಮಂಗಳೂರು, ಜೂನ್ 28, 2022 (ಕರಾವಳಿ ಟೈಮ್ಸ್) : 2003ನೇ ಇಸವಿಯಲ್ಲಿ ಭಾರತೀಯ ಅಂಚೆ ಇಲಾಖೆಯು ಬಿಡುಗಡೆಗೊಳಿಸಿದ್ದ ಡಾ. ಶಿವರಾಮ ಕಾರಂತರ ಸ್ಮರಣಾರ್ಥ ವಿಶೇಷ ಅಂಚೆ ಚೀಟಿಯನ್ನು ಹಾಗೂ ಇದರ ಬಗ್ಗೆ ಸಮಗ್ರ ಮಾಹಿತಿ ಇರುವ ವಿಶೇಷ ಫಲಕವನ್ನು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಅವರು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮಂಗಳವಾರ ಮಂಗಳೂರಿನಲ್ಲಿ ಹಸ್ತಾಂತರಿಸಿದರು.
ಈ ಸಂಧರ್ಭ ಮಂಗಳೂರು ಸಹಾಯಕ ಅಂಚೆ ಅಧೀಕ್ಷಕ ಶ್ರೀನಾಥ್ ಬಸ್ರೂರು ಉಪಸ್ಥಿತರಿದ್ದರು. ಈ ಫಲಕವು ಇನ್ನು ಮುಂದೆ ಕೋಟ ಶಿವರಾಮ್ ಕಾರಂತ್ ಥೀಮ್ ಪಾರ್ಕಿನಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿರಲಿದೆ.
0 comments:
Post a Comment