ಬಂಟ್ವಾಳ, ಜೂನ್ 08, 2022 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಮುಂಜೆ ಗ್ರಾಮದ ಶಿವಾಜಿನಗರ ನವಗ್ರಾಮ ಸೈಟ್ ನಿವಾಸಿ ಪದ್ಮನಾಭ ಪೂಜಾರಿ ಅವರ ಪತ್ನಿ ಗಿರಿಜಾ (55) ಅವರು ನೀರು ಬಿಸಿ ಮಾಡುವ ವೇಳೆ ಆಕಸ್ಮಿಕ ಬೆಂಕಿ ಅವಘಡಕ್ಕೀಡಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಜೂನ್ 6) ರಾತ್ರಿ ಮೃತಪಟ್ಟಿದ್ದಾರೆ.
ಕಳೆದ ಮೇ 30 ರಂದು ಸಂಜೆ ವೇಳೆ ಗಿರಿಜಾ ಅವರು ಸ್ನಾನ ಮಾಡಲು ಬಿಸಿ ನೀರು ಕಾಯಿಸಲು ಬಚ್ಚಲು ಕೊಟ್ಟಿಗೆಯ ಒಲೆಗೆ ಬೆಂಕಿ ಹಾಕುತ್ತಿದ್ದ ವೇಳೆ ತೆಂಗಿನ ಗರಿಯಿಂದ ಬೆಂಕಿ ಗಿರಿಜಾ ಅವರ ಉಟ್ಟ ಸೀರೆಗೆ ತಗುಲಿ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮಧ್ಯ ರಾತ್ರಿ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment