ಬಂಟ್ವಾಳ, ಜೂನ್ 08, 2022 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕದಲ್ಲಿ ರಿಕ್ಷಾ ಟೆಂಪೋ ನಿಲ್ಲಿಸಿ ಸಿಮೆಂಟ್ ಶೀಟ್ ಹೇರಿಕೊಳ್ಳುವ ಸಂದರ್ಭ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಕಲ್ಲಡ್ಕ ಸಮೀಪದ ಸುರಿಬೈಲು-ಖಂಡಿಗ ನಿವಾಸಿ ನೌಶಾದ್ ಸುರಿಬೈಲು (28) ಮೃತಪಟ್ಟಿದ್ದಾರೆ.
ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಹೆದ್ದಾರಿ ಬದಿ ಕೆ ಎನ್ ಬೇಕರಿ ಸಮೀಪ ರಸ್ತೆಯ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ರಿಕ್ಷಾ ಟೆಂಪೆÇೀ ನಿಲ್ಲಿಸಿ ಸಿಮೆಂಟ್ ಶೀಟ್ ಲೋಡು ಮಾಡುವ ಸಂದರ್ಭ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ನೌಶಾದ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment