ಬಂಟ್ವಾಳ, ಜೂನ್ 18, 2022 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಸಾಲುಮರ ತಿಮ್ಮಕ್ಕ ರಸ್ತೆ ಸಮೀಪ ಬುಧವಾರ ನಡೆದುಕೊಂಡು ಹೋಗುತ್ತಿದ್ದ ಪೂವಮ್ಮ ಎಂಬ ವೃದ್ದೆಯ ಕತ್ತಿನಿಂದ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಇನ್ಸ್‍ಪೆಕ್ಟರ್ ಟಿ ಡಿ ನಾಗರಾಜ್, ಪಿಎಸೈ ಹರೀಶ್ ನೇತೃತ್ವದ ಪೊಲೀಸರು ಆರೋಪಿ ಬೆಳ್ತಂಗಡಿ ತಾಲೂಕು ತಣ್ಣೀರುಪಂಥ ನಿವಾಸಿ ಉಸ್ಮಾನ್ ಅವರ ಪುತ್ರ ಇಲ್ಯಾಸ್ (26) ಎಂಬಾತನನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಮೊಟಾರ್ ಸೈಕಲ್ ಹಾಗೂ ಸುಲಿಗೆ ಮಾಡಿರುವ 2 ಚಿನ್ನ ಲೇಪಿತ ಬೆಳ್ಳಿಯ ಚೈನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
0 comments:
Post a Comment