ಬೆಂಗಳೂರು, ಜೂನ್ 17, 2022 (ಕರಾವಳಿ ಟೈಮ್ಸ್) : ಈ ಬಾರಿಯ ಅಂದರೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜೂನ್ 18 ರ ಶನಿವಾರ (ನಾಳೆ) ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು ಶನಿವಾರ ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲೂ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಎಪ್ರಿಲ್ 22 ರಿಂದ ಮೇ 18ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಈಗಾಗಲೇ ಮೌಲ್ಯಮಾಪನ ಹಾಗೂ ಅಂಕಗಳ ಜೋಡಣೆ ಕಾರ್ಯಗಳು ಸಲೀಸಾಗಿ ಮುಕ್ತಾಯಗೊಂಡಿದೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ತಿತಿತಿ.ಞಚಿಡಿಡಿesuಟಣ.ಟಿiಛಿ.iಟಿ ನಲ್ಲಿ ಪ್ರಕಟಗೊಳ್ಳಲಿದ್ದು, ಬಳಿಕ ಕಾಲೇಜುಗಳಲ್ಲೂ ಫಲಿತಾಂಶ ಪಡೆಯಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ನಾಳೆ ಸಿಇಟಿ ಗಡಿನಾಡು ಕನ್ನಡ ವಿದ್ಯಾರ್ಥಿಗಳ ಸಿಇಟಿ ಪರೀಕ್ಷೆ ಮುಗಿಯುವ ಹಂತದಲ್ಲಿ ಪಿಯುಸಿ ಫಲಿತಾಂಶ ಕೂಡಾ ಪ್ರಕಟಗೊಳ್ಳಲಿದೆ.
0 comments:
Post a Comment