ಬಂಟ್ವಾಳ, ಜೂನ್ 22, 2022 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ, ಮಂಗಳೂರು ಫಾಲ್ಕನ್ ಪದವಿಪೂರ್ವ ಕಾಲೇಜು ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮಾಹಾ ಸಾರಾ ಅವರು 576 ಅಂಕಗಳನ್ನು ಗಳಿಸಿ 96 ಶೇಕಡಾ ಫಲಿತಾಂಶ ದಾಖಲಿಸಿ ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈಕೆ ಬಂಟ್ವಾಳ ತಾಲೂಕು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಮುಖ್ತಾರ್ ಅಹ್ಮದ್ ಹಾಗೂ ಹಾಜಿರಾ ದಂಪತಿಯ ಪುತ್ರಿ.
ಈಕೆ ಮುಂದೆ ಎಂಬಿಬಿಎಸ್ ವ್ಯಾಸಂಗ ಮಾಡಿ ವೈದ್ಯೆಯಾಗುವ ಕನಸು ಕಂಡಿದ್ದು, ಹೆತ್ತವರು ಹಾಗೂ ಕುಟುಂಬಿಕರು ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿ ಮಾಹಾ ಸಾರಾ ಅವರ ಸಾಧನೆಗೆ ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಘಟಕ ಅಭಿನಂದಿಸಿದ್ದು, ಈಕೆಯ ವೈದ್ಯೆ ಕನಸಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸುವುದಾಗಿ ಘಟಕ ತಿಳಿಸಿದೆ.
0 comments:
Post a Comment