ಬಂಟ್ವಾಳ, ಜೂನ್ 07, 2022 (ಕರಾವಳಿ ಟೈಮ್ಸ್) : ತಾಲೂಕಿನ ಉಳಿ ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಾಸ್ಥಾನದ ಬಳಿ ಸೋಮವಾರ ಬೆಳಿಗ್ಗೆ ಅಕ್ರಮ ಗೋಸಾಗಾಟ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪಿಎಸ್ಐ ಸುತೇಶ್ ಕೆ ಪಿ ನೇತೃತ್ವದ ಪೊಲೀಸರು ವಾಹನ, ಜಾನುವಾರು ಸಹಿತ ಆರೋಪಿ ಉಳಿ ಗ್ರಾಮದ ಕಕ್ಯಪದವು ನಿವಾಸಿ ಇಸುಬು ಬ್ಯಾರಿ ಅವರ ಪುತ್ರ ಮಹಮ್ಮದ್ ರಫೀಕ್ (34) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಅಕ್ರಮ ದನ ಸಾಗಾಟ ವಾಹನವನ್ನು ತಡೆದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿ ವಾಹನ, ದನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಕಾರ್ಯಾಚರಣೆ ವೇಳೆ ಪೊಲೀಸರು ಮಹೇಂದ್ರ ಜೀತೋ ವಾಹನ, ಕಪ್ಪು ಮತ್ತು ಕಂದು ಬಣ್ಣದ ದನವನ್ನು ಸ್ವಾದೀನಪಡಿಸಿಕೊಂಡಿದ್ದು, ಸ್ವಾದಿಪಡಿಸಿಕೊಂಡ ದನದ ಅಂದಾಜು ಮೌಲ್ಯ 3 ಸಾವಿರ ರೂಪಾಯಿ ಹಾಗೂ ವಾಹನದ ಅಂದಾಜು ಮೌಲ್ಯ 1 ಲಕ್ಷ ರೂಪಾಯಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2022 ಕಲಂ 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 & ಕಲಂ 11(1)(ಡಿ) ಪ್ರಾಣಿ ಹಿಂಸೆ ತಡೆ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ ಕಾಯ್ದೆ 1960 & ಕಲಂ 66 ಐ ಎಂ ವಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment