ಬಂಟ್ವಾಳ, ಜೂನ್ 15, 2022 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧಾ ಕೇಂದ್ರಕ್ಕೆ ಮಂಗಳವಾರ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಕೃತ್ಯಕ್ಕೆ ಬಳಸುತ್ತಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪುತ್ತಿಲ ಗ್ರಾಮದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಕಾಡಿನ ಮಧ್ಯೆ ಎರಡು ಶೆಡ್‍ಗಳನ್ನು ನಿರ್ಮಿಸಿ ಮಾಂಸ ಮಾಡಲಾಗುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೂಂಜಾಲಕಟ್ಟೆ ಠಾಣಾ ಪಿಎಸ್ಸೈ ಸುತೇಶ್ ನೇತೃತ್ವದ ಪೊಲೀಸರು ಸುಮಾರು 2 ಕ್ವಿಂಟಾಲಿಗೂ ಅಧಿಕ ಪ್ರಮಾಣದ ದನದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಆರೋಪಿಗಳು ಪೊಲೀಸರ ಕೈಗೆ ಸಿಗದೆ ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ.
0 comments:
Post a Comment