ಬಂಟ್ವಾಳ, ಜೂನ್ 13, 2022 (ಕರಾವಳಿ ಟೈಮ್ಸ್) : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬಂಟ್ವಾಳ, ಬಂಟ್ವಾಳ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಬಂಟ್ವಾಳ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಕೊಡಂಗೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಸೋಮವಾರ (ಜೂ 13) ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಬಂಟ್ವಾಳ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಂಘದ ಅಧ್ಯಕ್ಷೆ ಶ್ರೀಮತಿ ಭಾಗ್ಯಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ ಪಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ ವೈ ತಳವಾರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೃಷ್ಣಮೂರ್ತಿ ಎನ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಸಿ ಬಿ ಗಣೇಶಾನಂದ ಸೋಮಯಾಜಿ, ಸಹಾಯಕ ಸರಕಾರಿ ಅಭಿಯೋಜಕಿ ಹಾಗೂ ಬಂಟ್ವಾಳ ಕಾನೂನು ಸೇವೆಗಳ ಸಮಿತಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಹರಿಣಿ ಕುಮಾರಿ ಡಿ, ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುಧೀರ್ ಜಿ, ಬಂಟ್ವಾಳ ಕಾರ್ಮಿಕ ಇಲಾಖಾ ನಿರೀಕ್ಷಕಿ ಶ್ರೀಮತಿ ಮರ್ಲಿನ್ ಡಿ’ಸೋಜಾ ಮೊದಲಾದವರು ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಭಾಗವಹಿಸಿ ವಿಶ್ವ ಬಾಲ ಕಾರ್ಮಿಕ ದಿನದ ಬಗ್ಗೆ ಕಾನೂನು ಮಾಹಿತಿ ನೀಡಿದರು. ಶಾಲಾ ಶಿಕ್ಷಕರಾದ ಅಶೋಕ್ ಕುಮಾರ್ ಸ್ವಾಗತಿಸಿ, ದೀಪ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment