ಬಂಟ್ವಾಳ, ಜೂನ್ 05, 2022 (ಕರಾವಳಿ ಟೈಮ್ಸ್) : ಪ್ರತಿಯೊಬ್ಬರ ವ್ಯಕ್ತಿಯ ಆರೋಗ್ಯಕ್ಕೆ ಪರಿಶುದ್ದವಾದ ಪರಿಸರ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿದಾಗ ಮಾತ್ರ ವಿಶ್ವ ಪರಿಸರ ದಿನಕ್ಕೆ ಅರ್ಥ ಬರಲು ಸಾಧ್ಯ ಎಂದು ಬಂಟ್ವಾಳ ತಹಶೀಲ್ದಾರ್ ಡಾ ಸ್ಮಿತಾ ರಾಮು ಅಭಿಪ್ರಾಯಪಟ್ಟರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾನುವಾರ ಬಂಟ್ವಾಳ ಕಂದಾಯ ಇಲಾಖೆ ವತಿಯಿಂದ ಬಿ ಸಿ ರೋಡು ಮಿನಿ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಪರಿಸರವನ್ನು ನಾಶ ಮಾಡದೆ, ಪರಿಸರ ಉಳಿದರೆ ಮಾತ್ರ ತನ್ನ ಉಳಿವು ಸಾಧ್ಯ ಎಂಬ ಸತ್ಯವನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ತನ್ನ ವ್ಯಾಪ್ತಿಯಲ್ಲಿ ಸಾಧ್ಯವಾಗುವಷ್ಟರ ಮಟ್ಟಿಗೆ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದರು. ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.
0 comments:
Post a Comment