ಬೆಂಗಳೂರು, ಜೂನ್ 03, 2022 (ಕರಾವಳಿ ಟೈಮ್ಸ್) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿಪೂರ್ವ ವಿದ್ಯಾರ್ಥಿಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ಅಥವಾ ಕೆಸಿಇಟಿ-2022 ಇದರ ಪರೀಕ್ಷಾ ಪ್ರವೇಶ ಪತ್ರ ಕಾರ್ಡ್ ಅಥವಾ ಹಾಲ್ ಟಿಕೆಟ್ ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‍ಸೈಟಿಗೆ ಭೇಟಿ ನೀಡಿ ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ಜೂನ್ 16, 17 ಮತ್ತು 18 ರಂದು ನಡೆಯಲಿದ್ದು, ಸರಕಾರ ಈಗಾಗಲೇ ಈ ಬಗ್ಗೆ ಸಕಲ ಸಿದ್ದತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್ ಸೈಟಿನಲ್ಲಿ ನಿರ್ದಿಷ್ಟ ಲಿಂಕ್ ಓಪನ್ ಮಾಡಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಹಾಲ್ ಟಿಕೆಟ್ ಡೌನ್‍ಲೋಡ್ ಮಾಡಬಹುದು.
ಯುಜಿಸಿಇಟಿ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಕ್ಕಾಗಿ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಈ ಬಾರಿ ಜೂನ್ 16, 17 ಮತ್ತು 18 ರಂದು ನಡೆಸಲು ಸಿಇಟಿ ಪರೀಕ್ಷೆ ನಡೆಯಲಿದೆ.
ಜೂನ್ 16 ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17 ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದೆ.
0 comments:
Post a Comment