ಬೆಳ್ತಂಗಡಿ, ಜೂನ್ 08, 2022 (ಕರಾವಳಿ ಟೈಮ್ಸ್) : ತಾಲೂಕಿನ ಚಾರ್ಮಾಡಿ ಸಮೀಪದ ಪಂಡಿಕಟ್ಟೆ ಎಂಬಲ್ಲಿ ಬೈಕ್‍ಗಳೆರಡು ಢಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್ (25) ಎಂದು ಹೆಸರಿಸಲಾಗಿದೆ. ನಝೀರ್ ಕೆಲಸ ಮುಗಿಸಿ ಮನೆಗೆ ವಾಪಾಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನೊಂದು ಬೈಕ್ ಸವಾರ ಕೂಡಾ ಘಟನೆಯಿಂದ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ನಝೀರ್ ತಂದೆ, ತಾಯಿ, ಓರ್ವ ಸಹೋದರ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment