ಬಂಟ್ವಾಳ, ಜುಲೈ 13, 2022 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ ಗ್ರಾಮದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜುಲೈ 16 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಇಲ್ಲಿನ ಅಜೆಕಳ ವಿಶ್ವಕರ್ಮ ಸಭಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ಗ್ರಾಮಸ್ಥರಿಗೆ ದೊರೆಯಲಿದೆ.
ಅಮ್ಟಾಡಿ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ಜುಲೈ 14ರೊಳಗೆ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment