ಮಂಗಳೂರು, ಜುಲೈ 21, 2022 (ಕರಾವಳಿ ಟೈಮ್ಸ್) : ಮಂಗಳೂರು ಹೊರವಲಯದ ದೇರಳಕಟ್ಟೆ ಕಣಚೂರು ಮಹಿಳಾ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಟನೆಗಳ ಉದ್ಘಾಟನೆಯು ಕಾಲೇಜು ಸಭಾಂಗಣದಲ್ಲಿ ಬುಧವಾರ (ಜು 21) ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಯಲದ ಸಹ ಕುಲಪತಿ ಪತಿರಾವ್ ಮಾತನಾಡಿ, ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಸಚ್ಚಾರಿತ್ರ್ಯದ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದರು.
ಸಂಸ್ಥೆಯ ಗೌರವಾಧ್ಯಕ್ಷ, ಕಣಚೂರು ವಿದ್ಯಾಸಂಸ್ಥೆಗಳ ಆಡಳಿತ ಸಲಹೆಗಾರ ಹಾಗೂ ಕಣ್ಣೂರು ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಪ್ರೊ ಅಬ್ದುಲ್ ರೆಹಮಾನ್ ಅವರು ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ ಹಾಗೂ ವೈಜ್ಞಾನಿಕ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಕಣಚೂರು ವಿದ್ಯಾ ಸಂಸ್ಥೆಗಳ ಸಂಚಾಲಕ ಅಬ್ದುಲ್ ರಹಿಮಾನ್ ಅವರು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನಿನ ಸದುಪಯೋಗದ ಬಗ್ಗೆ ಎಚ್ಚರಿಕೆಯ ಮಾತುಗಳನ್ನಾಡಿದರು.
ಕಣಚೂರು ಪದವಿ ಕಾಲೇಜು ಪ್ರಾಂಶುಪಾಲ ಪ್ರೊ ಇಕ್ಬಾಲ್ ಅಹಮದ್ ಯು ಟಿ, ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಶಾಹಿದಾ ಕಲ್ಲಾಜೆ, ಕಣಚೂರು ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ವಿಮಲಾ ಶೆಟ್ಟಿ, ಪ್ರೈಮರಿ ಸ್ಕೂಲ್ ಪ್ರಾಂಶುಪಾಲೆ ಲಿನೆಟ್ ಡಿ’ಸೋಜಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕಿ ಚೇತನಾ ಅತಿಥಿಗಳನ್ನು ಪರಿಚಯಿಸಿದರು. ಕಾಲೇಜು ಪ್ರಾಂಶುಪಾಲೆ ಶಾಹಿದಾ ಕಲ್ಲಾಜೆ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಯಾ ಶಿರೀನ್ ವಂದಿಸಿದರು. ಉಪನ್ಯಾಸಕಿಯರಾದ ರೂಪ ಹಾಗೂ ಪ್ರಮಿತಾ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment