ನವದೆಹಲಿ, ಜುಲೈ 20, 2022 (ಕರಾವಳಿ ಟೈಮ್ಸ್) : ದೇಶಾದ್ಯಂತ ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕೊನೆಗೂ ತನ್ನ ನಿರ್ಧಾರದಿಂದ ಹಿಂದೆ ಸರಿದ ಕೇಂದ್ರ ಸರಕಾರ, ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ ಜಿಎಸ್‍ಟಿ ಹೇರುವುದಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೋಧಿ, ಮೊಸರು, ಅಥವಾ ಲಸ್ಸಿ, ಅಕ್ಕಿ, ಓಟ್ಸ್, ಹಿಟ್ಟು, ತೊಗರಿಬೇಳೆ, ಮಂಡಕ್ಕಿ, ರವೆ, ಜೋಳ, ಸಣ್ಣ ಗೋಧಿಗಳ ಮೇಲಿನ ಜಿಎಸ್‍ಟಿ ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇದಕ್ಕೆ ಕಲವೊಂದು ಷರತ್ತುಗಳನ್ನು ವಿಧಿಸಲಾಗದೆ. ಈ ಎಲ್ಲಾ ವಸ್ತುಗಳ ಮೇಲೆ ಲೇಬಲ್ ಇದ್ದರೆ ಅಥವಾ ಪ್ಯಾಕ್ ಮಾಡಿದರೆ ಜಿಎಸ್‍ಟಿ ವಿನಾಯಿತಿ ಅನ್ವಯಿಸುವುದಿಲ್ಲ ಎಂದವರು ತಿಳಿಸಿದ್ದಾರೆ.
0 comments:
Post a Comment