ಬಂಟ್ವಾಳ, ಜುಲೈ 11, 2022 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ಉಪ್ಪುಗುಡ್ಡೆ ಕುಡಿಯುವ ನೀರಿನ ಟ್ಯಾಂಕ್ ಕುಸಿತ ಭೀತಿಯಿಂದ ಅಪಾಯದ ಸ್ಥಿತಿಯಲ್ಲಿರುವುದರಿಂದ ಪುರವಾಸಿಗಳಿಗೆ ಕುಡಿಯುವ ನೀರಿಗಾಗಿ ತಾತ್ವಾರ ಉಂಟಾಗಿದೆ.
ಪುರಸಭಾ ವ್ಯಾಪ್ತಿಯ ಮೆಲ್ಕಾರ್, ರೆಂಗೇಲು, ಶಾಂತಿಗುಡ್ಡೆ, ಬೊಂಡಾಲ ಮೊದಲಾದ ಪರಿಸರದ ವಾಸಿಗಳಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿರುವ ಪುರಸಭಾ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ. ಆದರೆ ಪರಿಸರವಾಸಿಗಳ ಕುಡಿಯುವ ನೀರಿನ ಸರಬರಾಜಿಗೆ ಯಾವುದೇ ಪರ್ಯಾಯ ವ್ಯವಸ್ಥೆ ಕೈಗೊಂಡಿರುವ ಬಗ್ಗೆ ಸಾರ್ಜನಿಕರಿಗೆ ಮಾಹಿತಿ ನೀಡಿಲ್ಲ.
0 comments:
Post a Comment