ಬೆಂಗಳೂರು, ಜುಲೈ 20, 2022 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದದೆ. ಆದರೆ ಇಲಾಖಾ ವೆಬ್‍ಸೈಟಿನಲ್ಲಿ ನಾಳೆ (ಜುಲೈ 21) ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, 2022ರ ಜೂನ್ 27 ರಿಂದ ಜುಲೈ 4ರವರೆಗೆ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗಿದ್ದು, ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 94,669 ವಿದ್ಯಾರ್ಥಿಗಳ ಪೈಕಿ 37,479 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.39.59 ಫಲಿತಾಂಶ ದಾಖಲಾಗಿದೆ ಎಂದಿದ್ದಾರೆ.
ನಾಳೆ (ಜುಲೈ 21 ಗುರುವಾರ) ಮಧ್ಯಾಹ್ನ 12 ಗಂಟೆ ಬಳಿಕ ಇಲಾಖಾ ವೆಬ್‍ಸೈಟ್ https://karresults.nic.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‍ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
0 comments:
Post a Comment