ಮಂಗಳೂರು, ಜುಲೈ 07, 2022 (ಕರಾವಳಿ ಟೈಮ್ಸ್) : ಅವಿಭಜಿತ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಗಾಳಿ ಸಹಿತ ಮಳೆ ಮುಂದುವರಿಯಲಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಕಟ್ಟೆಚ್ಚರ ಘೋಷಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 8 ಶುಕ್ರವಾರ ಹಾಗೂ ಜುಲೈ 9ರ ಶನಿವಾರ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಪ್ರೌಢಶಾಲೆ, ಪದವಿ ಪೂರ್ವ, ಪದವಿ, ಡಿಪ್ಲೊಮಾ, ಐಟಿಐ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಕೆ ವಿ ಹಾಗೂ ಕೂರ್ಮಾ ರಾವ್ ಅವರು ಆದೇಶಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ನದಿ, ಕೆರೆ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಪಾಲಕರು ಅಗತ್ಯ ಎಚ್ಚರಿಕೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆ ಮಾಡತಕ್ಕದ್ದು, ಜಿಲ್ಲಾಡಳಿತದಿಂದ ನೇಮಿಸಲಾಗಿರು ನೋಡಲ್ ಅಧಿಕಾರಿಗಳು ಸದಾ ಎಚ್ಚರದಿಂದ ಇದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು, ಪ್ರವಾಸಿಗರು ನದಿ ಹಾಗೂ ಸಮುದ್ರ ತೀರಕ್ಕೆ ತೆರಳದೆ ಇರುವುದು, ಸಂಬಂಧಪಟ್ಟ ಇಲಾಖಾಧಿಕಾರಿಗಳು ಕಾಳಜಿ ಕೇಂದ್ರ ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು ಇವೇ ಮೊದಲಾದ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಧಿಕಾರಿ ಆದೇಶದಲ್ಲಿ ಘೋಷಿಸಿದ್ದಾರೆ.
ಪ್ರಾಕೃತಿಕ ವಿಕೋಪ ಸಂಬಂಧಿ ಸಮಸ್ಯೆಗಳಿಗೆ ಸಾರ್ವಜನಿಕರು 24*7 ಕಂಟ್ರೋಲ್ ರೂಂ ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಡೀಸಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
0 comments:
Post a Comment