ವನ ಮಹೋತ್ಸವ ಕಾರ್ಯಕ್ರಮಗಳು ಕಾಟಾಚಾರಕ್ಕಾಗಿ ಆಗದೆ ಮರ ಉಳಿಸುವ ಕೆಲಸ ಆಬೇಕು : ಸ್ಟ್ಯಾನಿ ಲೋಬೋ - Karavali Times ವನ ಮಹೋತ್ಸವ ಕಾರ್ಯಕ್ರಮಗಳು ಕಾಟಾಚಾರಕ್ಕಾಗಿ ಆಗದೆ ಮರ ಉಳಿಸುವ ಕೆಲಸ ಆಬೇಕು : ಸ್ಟ್ಯಾನಿ ಲೋಬೋ - Karavali Times

728x90

28 July 2022

ವನ ಮಹೋತ್ಸವ ಕಾರ್ಯಕ್ರಮಗಳು ಕಾಟಾಚಾರಕ್ಕಾಗಿ ಆಗದೆ ಮರ ಉಳಿಸುವ ಕೆಲಸ ಆಬೇಕು : ಸ್ಟ್ಯಾನಿ ಲೋಬೋ

ಉಡುಪಿ, ಜುಲೈ 28, 2022 (ಕರಾವಳಿ ಟೈಮ್ಸ್) : ವನ ಮಹೋತ್ಸವದಂತಹ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೆ, ನಾವು ನೆಡುವ ಪ್ರತಿ ಗಿಡವು ಬೆಳಯುವಂತೆ ನೋಡಿಕೊಳ್ಳಬೇಕು. ಪ್ರಕೃತಿಯಲ್ಲಿ ನಾವು ನೆಟ್ಟ ಗಿಡ ಮರವಾಗಿ ಬೆಳೆದಾಗ ಅದರಿಂದ ನಮಗೂ ನೆಮ್ಮದಿ ಸಿಗುತ್ತದೆ. ವನಮಹೋತ್ಸವದಂತಹ ಕಾರ್ಯಕ್ರಮಗಳು ಪವಿತ್ರ ಕಾರ್ಯಕ್ರಮವಾಗಿದೆ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಸ್ಟ್ಯಾನಿ ಬಿ ಲೋಬೋ ಹೇಳಿದರು. 

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಉದ್ಯಾವರ ಗ್ರಾಮದ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ 500 ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಗಿಡ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂತ ಫಾನ್ಸಿಸ್ ಝೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವನಮಹೋತ್ಸವ ಮತ್ತು ಗಿಡ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಯಕ್ರಮದ ಪ್ರಾಯೋಜಕ, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ, ತಾಪಮಾನ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಪರಿಸರವನ್ನು ಉಳಿಸಬಹುದು. ಮಾತ್ರವಲ್ಲದೆ ಕಾಲ ಕಾಲಕ್ಕೆ ಬೇಕಾದ ಗಾಳಿ-ಮಳೆ ನಮಗೆ ದೊರಕುತ್ತದೆ. ವಿದ್ಯಾರ್ಥಿಗಳು ಇಂದು ಪಡಕೊಂಡ ಗಿಡಗಳನ್ನು ತಮ್ಮ ಮನೆಯ ಆವರಣದಲ್ಲಿ ಬೆಳೆಸಿ ಉತ್ತಮ ರೀತಿಯಲ್ಲಿ ಪೆÇೀಷಣೆ ಮಾಡಿ ಎಂದರಲ್ಲದೆ ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಗಿಡ ನೆಟ್ಟು ಬೆಳೆಸಿದವರೆಗೆ ಪೆÇ್ರೀತ್ಸಾಹ ಧನ ನೀಡಲಾಗುವುದು ಎಂದರು. ಇದೇ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗಿಡ ವಿತರಿಸಲಾಯಿತು. 

ಈ ಸಂದರ್ಭ ಸಾಮಾಜಿಕ ಅರಣ್ಯ ವಲಯ ಉಡುಪಿ ಇದರ ಅರಣ್ಯ ಪ್ರೇರಕ ಪ್ರತ್ಯಕ್ಷ್ ಕಾಮತ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಲಯನ್ಸ್ ಜಿಲ್ಲಾ ಡೈರೆಕ್ಟರಿ ಎಡಿಟರ್ ಸ್ವಪ್ನಾ ಸುರೇಶ್, ವಲಯ ಎರಡರ ವಲಯಾಧ್ಯಕ್ಷ ಜೋನ್ ಫೆರ್ನಾಂಡಿಸ್, ಲಯನ್ಸ್ ಕ್ಲಬ್ ಸಂತೆಕಟ್ಟೆ ಅಧ್ಯಕ್ಷ ಪ್ರವೀಣ್ ಕರ್ವಾಲೋ, ಕ್ಯಾಬಿನೆಟ್ ಸದಸ್ಯ ಗೊಡ್ಫ್ರಿ ಡಿ’ಸೋಜಾ, ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ವಿಜಯ ಕುಮಾರ್ ಉದ್ಯಾವರ, ಶಾಲಾ ಕಾಲೇಜು ಮುಖ್ಯೋಪಾಧ್ಯಾಯರು ಮತ್ತು ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿ, ಕೋಶಾಧಿಕಾರಿ ರೋಶನ್ ಕ್ರಾಸ್ತಾ ವಂದಿಸಿದರು. ಕಾರ್ಯದರ್ಶಿ ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ವನ ಮಹೋತ್ಸವ ಕಾರ್ಯಕ್ರಮಗಳು ಕಾಟಾಚಾರಕ್ಕಾಗಿ ಆಗದೆ ಮರ ಉಳಿಸುವ ಕೆಲಸ ಆಬೇಕು : ಸ್ಟ್ಯಾನಿ ಲೋಬೋ Rating: 5 Reviewed By: karavali Times
Scroll to Top