ಬಂಟ್ವಾಳ, ಆಗಸ್ಟ್ 30, 2022 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಪೊಸಳ್ಳಿಯಲ್ಲಿರುವ ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘದ ಕುಲಾಲ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸೆಪ್ಟೆಂಬರ್ 4 ರ ಭಾನುವಾರ ಬೆಳಿಗ್ಗೆ 10.30ಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆ ಎಂದು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ್ ಸಿ. ಪೆರ್ನೆ ಹೇಳಿದರು.
ಈ ಬಗ್ಗೆ ಮಂಗಳವಾರ ಬಿ ಸಿ ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಶಿಲಾಫಲಕ ಅನಾವರಣಗೊಳಿಸುವರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂಭನಿಧಿ ಸಂಚಯಕ್ಕೆ ಚಾಲನೆ ನೀಡುವರು. ಮಾಜಿ ಸಚಿವ ಬಿ ರಮಾನಾಥ ರೈ ಕಟ್ಟಡ ವಿನ್ಯಾಸ ಅನಾವರಣಗೊಳಿಸುವರು. ಸಂಘದ ಅಧ್ಯಕ್ಷ ನಾರಾಯಣ ಸಿ ಪೆರ್ನೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ) ಮಂಗಳೂರು ಇದರ ಅಧ್ಯಕ್ಷ ಡಾ ಅಣ್ಣಯ್ಯ ಕುಲಾಲ್, ಪುರಸಭಾ ಸದಸ್ಯೆ ಶೋಭಾ ಹರಿಶ್ಚಂದ್ರ ಭಾಗವಹಿಸುವರು. ಇದೇ ವೇಳೆ ದೇವರಾಜ ಅರಸು ರಾಜ್ಯ ಪ್ರಶಸ್ತಿ ಪುರಸ್ಕøತ ಡಾ ಅಣ್ಣಯ್ಯ ಕುಲಾಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದರು.
ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಮಾತನಾಡಿ 1978 ರಲ್ಲಿ ಸ್ಥಾಪನೆಯಾದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮಯ್ಯರ ಬೈಲುವಿನಲ್ಲಿ ಕಚೇರಿ ಹೊಂದಿ ಕಾರ್ಯನಿರ್ವಹಿಸಿಕೊಂಡು ಬರುತ್ತಿತ್ತು. ಕುಲಾಲ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದರ ಜೊತೆಗೆ ಸಮಾಜದ ಬಂಧುಗಳ ಕಷ್ಟಗಳಿಗೆ ಸ್ಪಂದಿಸುತ್ತಾ ಹಿರಿಯರ ಮಾರ್ಗದರ್ಶನದೊಂದಿಗೆ ನಮ್ಮ ಸಂಘ ಮುನ್ನಡೆದುಕೊಂಡು ಬಂದಿರುತ್ತದೆ. ಸಂಘದ ಕಾರ್ಯಚಟುವಟಿಕೆಗಳಿಗೆ ಪೂರಕವಾಗುವಂತೆ ಹಾಗೂ ಸ್ವಂತ ಸಭಾಭವನವೊಂದನ್ನು ನಿರ್ಮಿಸಬೇಕೆಂಬ ಸಮಾಜ ಬಂಧುಗಳ ಬೇಡಿಕೆಯಂತೆ ಪೊಸಳ್ಳಿಯಲ್ಲಿ ಜಮೀನು ಖರೀದಿ ಹಾಗೂ ದಾನರೂಪವಾಗಿ ಬಂದ ಜಮೀನಿನಲ್ಲಿ ಸುಮಾರು 80 ಲಕ್ಷ ರೂಪಾಯಿ ವೆಚ್ಚದ ನೆಲ ಅಂತಸ್ತಿನ ಸಭಾ ಭವನವನ್ನು ನಿರ್ಮಿಸಲಾಗಿದೆ. ಕುಲಾಲ ಬಂಧುಗಳು ಮಾತ್ರವಲ್ಲದೆ ಎಲ್ಲಾ ಸಮುದಾಯದ ಬಂಧುಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಈ ಸಭಾ ಭವನನವನ್ನು ಬಾಡಿಗೆ ನೀಡುತ್ತಾ ಬರಲಾಗುತ್ತಿದೆ.
ಈಗಿರುವ ಸಭಾಭವನದಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ಸಭಾಭವನವನ್ನು ವಿಸ್ತರಿಸಿ ಮೇಲಂತಸ್ತಿನ ಕಟ್ಟಡ ನಿರ್ಮಿಸುವ ಬಗ್ಗೆ ಸಂಘದ ಸದಸ್ಯರಿಂದ ಬಂದ ಸಲಹೆಯಂತೆ ಕಟ್ಟಡ ನಿರ್ಮಾಣದ ಬಗ್ಗೆ ಚಿಂತಿಸಿ ಕಟ್ಟಡ ಸಮಿತಿಯನ್ನು ರಚಿಸಿ ಸುಮಾರು 2.5 ಕೋಟಿ ರೂಪಾಯಿ ವೆಚ್ಚದ ಮೇಲಂತಸ್ತಿನ ಕಟ್ಟಡ ನಿರ್ಮಿಸಲು ಸಂಘ ಯೋಜನೆ ರೂಪಿಸಿ ಕಾಯೋನ್ಮುಖವಾಗಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರಾರಂಭಿಕವಾಗಿ “ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಚಾಲನೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಉಪಾಧ್ಯಕ್ಷ ಸುಂದರ ಬಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಲಾಲ್ ಅಗ್ರಬೈಲು, ಕೋಶಾಧಿಕಾರಿ ಸತೀಶ್ ಬಿ ಕುಲಾಲ್, ಕಟ್ಟಡ ಸಮಿತಿ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ಲಿಂಗಪ್ಪ, ಸಂಘದ ಸದಸ್ಯರಾದ ಮಚ್ಚೇಂದ್ರ ಸಾಲ್ಯಾನ್, ಮನೋಹರ ನೇರಂಬೋಳ್, ದಯಾನಂದ ನೇರಂಬೋಳ್ ಉಪಸ್ಥಿತರಿದ್ದರು.
0 comments:
Post a Comment