ಬೆಳ್ಳಾರೆ, ಆಗಸ್ಟ್ 07, 2022 (ಕರಾವಳಿ ಟೈಮ್ಸ್) : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಪ್ರಮುಖ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ಸುಳ್ಯ ತಾಲೂಕಿನ ನಾವೂರು ಗ್ರಾಮದ ಮಹಾಮಾಯಿ ದೇವಸ್ಥಾನ ಬಳಿಯ ನಿವಾಸಿ ಯಾಕೂಬ್ ಅವರ ಪುತ್ರ ಆಬಿದ್ (22) ಹಾಗೂ ಬೆಳ್ಳಾರೆ ಸಮೀಪದ ಗೌರಿಹೊಳೆ ನಿವಾಸಿ ಮೊಹಮ್ಮದ್ ಅವರ ಪುತ್ರ ನೌಫಲ್ (28) ಎಂಬವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ 6ಕ್ಕೇರಿದೆ ಎಂದು ಜಿಲ್ಲಾ ಎಸ್ಪಿ ಋಷಿಕೇಶ್ ಸೊನಾವಣೆ ಭಗವಾನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
7 August 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment