ಬಂಟ್ವಾಳ, ಆಗಸ್ಟ್ 30, 2022 (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳು ಚುಟುಕು ಸಾಹಿತ್ಯ ಬರೆಯುವುದರಿಂದ ಭಾಷಾ ಸಾಮಥ್ರ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಬಹುದು ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತ ಪುತ್ತೂರು ಹೇಳಿದರು.
ಪೆರ್ನೆ ಶ್ರೀರಾಮಚಂದ್ರ ಪ್ರೌಢ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಮತ್ತು ಇಕೋ ಕ್ಲಬ್ ವತಿಯಿಂದ ಏರ್ಪಡಿಸಲಾದ ಚುಟುಕು ರಚನಾ ಕಮ್ಮಟ ಹಾಗೂ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ತಾರನಾಥ ಶೆಟ್ಟಿ ಎಚ್ ಮಾತನಾಡಿ, ವಿದ್ಯಾರ್ಥಿಗಳು ಬರವಣಿಗೆಯ ಕೌಶಲ್ಯವನ್ನು ಬೆಳೆಸಿಕೊಂಡು ಒಳ್ಳೆಯ ಸಾಹಿತಿಗಳಾಗಬೇಕೆಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಚುಟುಕು ಸಾಹಿತ್ಯ ರಚನೆಯ ಬಗ್ಗೆ ತರಬೇತಿ ನೀಡಿದರು. ವಿದ್ಯಾರ್ಥಿಗಳ ಕವಿಗೋಷ್ಠಿಯಲ್ಲಿ ಅಶ್ವಿನಿ, ದಿವ್ಯಾ, ಶಕೀಲಾ, ಜಯರಾಮ, ರಶ್ಮಿ, ಮೋಕ್ಷಿತಾ, ಲತೀಕ್ಷಾ ಭಾಗವಹಿಸಿ ಸ್ವರಚಿತ ಚುಟುಕುಗಳನ್ನು ವಾಚಿಸಿದರು.
ಶಾಲಾ ವಿಜ್ಞಾನ ಶಿಕ್ಷಕ ಚಂದ್ರಹಾಸ ರೈ, ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ ಆರ್, ರಾಕೇಶ್ ಎ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment