ಬಂಟ್ವಾಳ, ಆಗಸ್ಟ್ 17, 2022 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರ ಸಮ್ಮುಖದಲ್ಲೇ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರಿಗೆ ಅಗೌರವ ತೋರಲಾಗಿದ್ದು, ಇದು ಅತ್ಯಂತ ಖಂಡನೀಯ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಧ್ವಜಸ್ಥಂಭದ ಕೆಳಗೆ ಸಾಮಾನ್ಯ ಕುರ್ಚಿಯಲ್ಲಿ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಿ ಶಾಸಕರು ಹಾಗೂ ಅಧಿಕಾರಿಗಳು ಧ್ವಜಾರೋಹಣ ನಡೆಸಿರುವುದು ಈ ದೇಶದ ಅಸ್ತಿತ್ವವಾಗಿರುವ ನಾಯಕರಿಗೆ ಎಸಗಲಾಗಿರುವ ಘೋರ ಅವಮಾನವಾಗಿದೆ. ಇದು ತೀರಾ ಅಕ್ಷಮ್ಯ. ಇದಕ್ಕೆ ಕಾರಣವಾಗಿರುವ ಅಧಿಕಾರಿಗಳ ಅಥವಾ ಆಚರಣಾ ಸಮಿತಿಯ ಪದಾಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಹಾಗೂ ಈ ಪ್ರಮಾದಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರು ತಕ್ಷಣ ನಾಡಿನ ಜನತೆಯ ಕ್ಷಮೆ ಯಾಚಿಸುವಂತೆ ಬೇಬಿ ಕುಂದರ್ ಆಗ್ರಹಿಸಿದ್ದಾರೆ.
0 comments:
Post a Comment