ಬಂಟ್ವಾಳ, ಆಗಸ್ಟ್ 15, 2022 (ಕರಾವಳಿ ಟೈಮ್ಸ್) : ತಾಲೂಕಿನ ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸೋಮವಾರ ಆಚರಿಸಲಾಯಿತು.
ಕಾಲೇಜು ಸ್ಥಳದಾನಿ ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಆಹ್ವಾನಿತ ಖಾಯಂ ಸದಸ್ಯ ಅಜೇಯ ಕುಮಾರ್ ಕೊಂಬರಬೈಲು ಅವರ ಉಪಸ್ಥಿತಿಯಲ್ಲಿ ಪ್ರೌಢಶಾಲಾ ವಿಭಾಗ ಡಿ ದರ್ಜೆಯ ನೌಕರ ಬಾಬು ಅವರು ರಾಷ್ಟ್ರ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು.
ಸಂಸ್ಥೆಯ ಪ್ರಾಂಶುಪಾಲ ಶ್ರೀಧರ ಎಚ್ ಜಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ವಾಡಿ ಎಸ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಪದಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಪ್ರಕಾಶ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ನಾಗರಾಜ ಶೆಟ್ಟಿ, ಕಮಲ್ ಶೆಟ್ಟಿ, ರಮೇಶ್ ಶೆಟ್ಟಿ, ಯಶೋದರ ಶೆಟ್ಟಿ, ಪ್ರಮೀಳ, ಕಾಲೇಜು ಉಪ ಪ್ರಾಂಶುಪಾಲೆ ವಿದ್ಯಾಕುಮಾರಿ, ಕಾಲೇಜು ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
0 comments:
Post a Comment