ಎನ್ನೆಸ್ಸೆಸ್ ಸೇರುವ ಮೂಲಕ ವಿದ್ಯಾರ್ಥಿಗಳು ಸೇವೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಯೂಸುಫ್ ವಿಟ್ಲ ಕರೆ - Karavali Times ಎನ್ನೆಸ್ಸೆಸ್ ಸೇರುವ ಮೂಲಕ ವಿದ್ಯಾರ್ಥಿಗಳು ಸೇವೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಯೂಸುಫ್ ವಿಟ್ಲ ಕರೆ - Karavali Times

728x90

29 August 2022

ಎನ್ನೆಸ್ಸೆಸ್ ಸೇರುವ ಮೂಲಕ ವಿದ್ಯಾರ್ಥಿಗಳು ಸೇವೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಯೂಸುಫ್ ವಿಟ್ಲ ಕರೆ

ಬಂಟ್ವಾಳ, ಆಗಸ್ಟ್ 29, 2022 (ಕರಾವಳಿ ಟೈಮ್ಸ್) : ಉತ್ತಮ ಸೇವಕರಿಗೆ ಮಾತ್ರ ಒಳ್ಳೆಯ ನಾಯಕರಾಗಲು ಸಕಲ ಅವಕಾಶಗಳು ಒದಗಿ ಬರುತ್ತವೆ. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿ ಎನ್ನೆಸ್ಸೆಸ್ ಘಟಕಕ್ಕೆ ಸೇರಿ ಸೇವಾ ಪರಿಣತಿ ಪಡೆದುಕೊಂಡು ಭವಿಷ್ಯದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳುವ ಅವಕಾಶ ತಮ್ಮದಾಗಿಸಿಕೊಳ್ಳಬೇಕು ಎಂದು ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಹೇಳಿದರು.

ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‍ಡಿಪಿ) ಅನ್ವಯ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ  ಏರ್ಪಡಿಸಲಾಗಿದ್ದ ನಾಯಕತ್ವ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಯು ಎನ್ ಡಿ ಪಿ ರಾಜ್ಯ ತರಬೇತುದಾರ ಶ್ರೀಕಾಂತ್ ಪೂಜಾರಿ ಹಾಗೂ ಸುರಕ್ಷಾ  ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜಿನ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ಕೆ ಪ್ರಸ್ತಾವನೆಗೈದರು. ಉಪನ್ಯಾಸಕ ದಾಮೋದರ ಇ ಸಹಕರಿಸಿದರು. ವಿದ್ಯಾರ್ಥಿನಿ ಸಂಧ್ಯಾ ಸ್ವಾಗತಿಸಿ, ಘಟಕದ ನಾಯಕ ಧನುಷ್ ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಎನ್ನೆಸ್ಸೆಸ್ ಸೇರುವ ಮೂಲಕ ವಿದ್ಯಾರ್ಥಿಗಳು ಸೇವೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಯೂಸುಫ್ ವಿಟ್ಲ ಕರೆ Rating: 5 Reviewed By: karavali Times
Scroll to Top