ಬಂಟ್ವಾಳ, ಆಗಸ್ಟ್ 28, 2022 (ಕರಾವಳಿ ಟೈಮ್ಸ್) : ಮಕ್ಕಳಲ್ಲಿ ಸುಪ್ತವಾಗಿ ಇರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಗಳು ದೊರೆಯಬೇಕು. ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮವಾದ ಅವಕಾಶವನ್ನು ಕಲ್ಪಿಸಿಕೊಡುತ್ತವೆ ಎಂದು ವೀರಕಂಭ-ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಸಂಜೀವ ಮೂಲ್ಯ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸರಕಾರಿ ಪ್ರಾಥಮಿಕ ಶಾಲೆ ಮಜಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿ ಇದರ ಸಹಕಾರದೊಂದಿಗೆ ವೀರಕಂಭ-ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಬಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.
ಬಿ ಸಿ ರೋಡು ಸಿಟಿ ರೋಟರಿ ಕ್ಲಬ್ ಅಧ್ಯಕ್ಷೆ ಪಲ್ಲವಿ ಕಾರಂತ್ ಮಾತನಾಡಿ, ಶಿಕ್ಷಣ ವ್ಯವಸ್ಥೆಯ ಹಲವು ಕಾರ್ಯಕ್ರಮಗಳು ಮಕ್ಕಳ ಉತ್ತಮ ಭವಿಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗಳಲ್ಲಿ ಇವುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಮಕ್ಕಳ ಭವಿಷ್ಯವು ಉತ್ತಮವಾಗುವಲ್ಲಿ ಇಂತಹ ಕಾರ್ಯಕ್ರಮಗಳು ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದರು.
ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಮಾತನಾಡಿಮ ಸ್ವರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಯಬೇಕು. ಆಗ ಮಾತ್ರ ಮಕ್ಕಳು ಅನುಭವವನ್ನು ಹೊಂದಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬಿ ಸಿ ರೋಡು ಸಿಟಿ ಇದರ ಜಿ ಎಸ್ ಆರ್ ಪದ್ಮನಾಭ ರೈ, ಝೋನಲ್ ಲೆಫ್ಟಿನೆಂಟ್ ಸತೀಶ್ ಕುಮಾರ್ ಕೆ, ವೀರಕಂಭ ಗ್ರಾಮ ಪಂಚಾಯತ್ ಸದಸ್ಯೆ ಜಯಂತಿ, ಮಜಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರಾ, ಸ್ಪರ್ಧೆಗಳ ಬಹುಮಾನದ ಪ್ರಯೋಜಕ, ಶಾಲಾ ಹಿರಿಯ ವಿಧ್ಯಾರ್ಥಿ ಜಯಪ್ರಕಾಶ್ ತೆಕ್ಕಿಪಾಪು, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರತ್ನ, ಸಮೂಹ ಸಂಪನ್ಮೂಲ ವ್ಯಕ್ತಿ ಮೆಟಿಲ್ಡಾ ಲೋಬೋ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಣ ಸಂಯೋಜಕಿ ಸುಧಾ ಪ್ರಸ್ತಾವನೆಗೈದರು. ಶಿಕ್ಷಕಿ ಶಕುಂತಳಾ ಎಂ ಬಿ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಕಲ್ಲಡ್ಕ ಕ್ಲಸ್ಟರ್ ವ್ಯಾಪ್ತಿಯ 12 ಶಾಲೆಗಳ ವಿಧ್ಯಾರ್ಥಿಗಳಿಗೆ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ವೈಯುಕ್ತಿಕವಾಗಿ ಒಟ್ಟು 27 ಸ್ಪರ್ಧೆಗಳು ನಡೆದವು.
ಸಮಾರೋಪ ಸಮಾರಂಭದಲ್ಲಿ ಮಜಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ವಿಜಯ್ ಶೇಖರ್, ಸದಸ್ಯರುಗಳಾದ ಗೋಪಾಲಕೃಷ್ಣ ಭಟ್, ವಿಶ್ವನಾಥ್, ವನಿತಾ, ವೀಣಾ, ಹರಿಣಾಕ್ಷಿ, ಅಸ್ಲಿಯ, ವೀರಕಂಭ ಪಂಚಾಯತ್ ಸದಸ್ಯೆ ಶ್ರೀಮತಿ ಮೀನಾಕ್ಷಿ, ಬಾಳ್ತಿಲ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಉತ್ತಮ ಸಂಪನ್ಮೂಲ ವ್ಯಕ್ತಿ ಪ್ರಶಸ್ತಿ ವಿಜೇತ ಪ್ರದೀಪ್, ಕಲ್ಲಡ್ಕ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಅಬೂಬಕ್ಕರ್ ಅಶ್ರಫ್, ನೆಟ್ಲ ಶಾಲಾ ಶಿಕ್ಷಕ ಪ್ರವೀಣ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment