ಬಂಟ್ವಾಳ, ಆಗಸ್ಟ್ 24, 2022 (ಕರಾವಳಿ ಟೈಮ್ಸ್) : ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಮತ್ತೆ ಭಾರೀ ಮಳೆ ಸುರಿಯುತ್ತಿದ್ದು, ಕೆಲವೆಡೆ ಮಳೆ ಹಾನಿ ಪ್ರಕರಣಗಳು ವರದಿಯಾಗಿದೆ. ಬಾಳ್ತಿಲ ಗ್ರಾಮದ ಬಸ್ತಿ ಬಳಿ ನಿವಾಸಿ ಸೋಮಪ್ಪ ನಾಯ್ಕ ಅವರ ವಾಸ್ತವ್ಯದ ಮನೆಗೆ ಮರ ಮತ್ತು ಮಣ್ಣು ಜರಿದು ಬಿದ್ದು ಹಾನಿಯಾಗಿರುತ್ತದೆ. ನೆಟ್ಲ ಮುಡ್ನೂರು ಗ್ರಾಮದ ಭಗವಂತಕೋಡಿ ನಿವಾಸಿ ಅಬ್ದುಲ್ ಮಜೀದ್ ಬಿನ್ ಅಬೂಬಕ್ಕರ್ ಅವರ ಮನೆಯ ಹಿಂಭಾಗದ ಗುಡ್ಡ ಕುಸಿದಿರುತ್ತದೆ.
ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ನಿವಾಸಿ ಮಂಜುನಾಥ ಅವರ ಮನೆಯ ಹಿಂಬದಿ ಕುಸಿದಿರುತ್ತದೆ. ಹೊನ್ನಪ್ಪ ಬಿನ್ ಕೋಟ್ಯಪ್ಪ ಅವರ ಮನೆಯ ಕಂಪೌಂಡ್ ಕುಸಿದು ಬಿದ್ದು ಹಾನಿ ಸಂಭವಿಸಿರುತ್ತದೆ.
0 comments:
Post a Comment